ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾ ವಿರುದ್ಧ ಫೆಬ್ರವರಿ 9 ರಿಂದ ಶುರುವಾಗಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ಪ್ರಮುಖ ವೇಗಿ ಜೋಶ್ ಹ್ಯಾಝಲ್ವುಡ್ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ.
ಕಳೆದ ತಿಂಗಳು ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಹ್ಯಾಝಲ್ವುಡ್ ಅವರ ಎಡಗಾಲಿಗೆ ಗಾಯವಾಗಿತ್ತು. ಈ ಗಾಯವು ಇನ್ನೂ ಕೂಡ ಸಂಪೂರ್ಣವಾಗಿ ಗುಣವಾಗಿರದ ಕಾರಣ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯಾ ತಂಡ ಅಭ್ಯಾಸ ಶಿಬಿರದಲ್ಲೂ ಜೋಶ್ ಹ್ಯಾಝಲ್ವುಡ್ ಸಂಪೂರ್ಣವಾಗಿ ತೊಡಗಿಸಿಕೊಂಡಿರಲಿಲ್ಲ. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರ ಕಾರಣ ವಿಶ್ರಾಂತಿ ಪಡೆದಿದ್ದರು. ಸದ್ಯ ಫಿಟ್ನೆಸ್ ಸಮಸ್ಯೆಯಲ್ಲಿರುವ ಹ್ಯಾಝಲ್ವುಡ್ನನ್ನು ಮೊದಲ ಪಂದ್ಯದಲ್ಲಿ ಕಣಕ್ಕಿಳಿಸದಿರಲು ಆಸ್ಟ್ರೇಲಿಯಾ ತಂಡದ ಆಡಳಿತ ಮಂಡಳಿ ನಿರ್ಧರಿಸಿದೆ.