ಭವಾನಿ ರೇವಣ್ಣಗೆ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

ಹೀಗಾಗಿ ಎಸ್​ಐಟಿ ಅಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಪೊಲೀಸರು ಭವಾನಿ ಅವರಿಗೆ ತನಿಖೆಗೆ ಹಾಜರಾಗುವಂತೆ 15 ದಿನಗಳ ಹಿಂದೆ ನೊಟೀಸ್​ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸದ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಏತನ್ಮಧ್ಯೆ ಶುಕ್ರವಾರ ಬೆಳಗ್ಗೆ ಎಸ್​ಐಟಿ ಅಧಿಕಾರಿಗಳೂ ಭವಾನಿ ಅವರಿಗೆ ಎರಡನೇ ನೊಟೀಸ್​ ನೀಡಿದ್ದರು. ಅವರು ಮನೆಯಲ್ಲಿ ಇಲ್ಲದ ಕಾರಣ ನೊಟೀಸ್ ಅಂಟಿಸಿ ಬಂದಿದ್ದರು. ಇದೀಗ ಕೋರ್ಟ್​​ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಮೇ 29ರಂದು ಈ ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರವರೆಗೆ ತೀರ್ಪು ಕಾಯ್ದಿರಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!