ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದ್ದು, ಈ ವೇಳೆ ಶ್ರೀರಾಮುಲು ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ.
ಇದೀಗ ಶ್ರೀರಾಮಲು ಪಕ್ಷ ತೊರೆಯುವ ಬಗ್ಗೆ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿನ ಜಟಾಪಟಿ ಬೆಳವಣಿಗೆ ಬಗ್ಗೆ ಶ್ರೀರಾಮುಲು ಇದೀಗ ದೂರು ನೀಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಸಂಘ ಪರಿವಾರದ ಇಬ್ಬರು ಮುಖಂಡರಿಗೆ ಶ್ರೀರಾಮುಲು ದೂರು ನೀಡಿದ್ದಾರೆ.
ನನಗೆ ಸಭೆಯಲ್ಲಿ ಅಪಮಾನ ಮಾಡಿದ್ದಾರೆ. ಜನಾರ್ದನ ರೆಡ್ಡಿ ನನ್ನ ಟಾರ್ಗೆಟ್ ಮಾಡ್ತಾ ಇದ್ದಾರೆ. ವಿಜಯೇಂದ್ರ ನನ್ನ ಪರ ಇರಲಿಲ್ಲ. ನಾನು ಪಕ್ಷ ಬಿಡುತ್ತೇನೆ, ನಿಮಗೆ ನಾನು ಬೇಡ ಅಂದ್ರೆ ಹೇಳಿ ಅಂದಿದ್ದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಂಡೂರು ಸೋಲಿಗೆ ಶ್ರೀರಾಮುಲು ಕಾರಣ ಎಂದು ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತು ಹೈಕಮಾಂಡ್‍ಗೆ ದೂರು ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ರಾಮುಲು ಅವರಿಗೆ ರಾಧಾ ಮೋಹನದಾಸ್ ಅಗರವಾಲ್ ಸಭೆಯಲ್ಲಿ ತರಾಟೆ ತೆಗೆದುಕೊಂಡಿದ್ದರು. ಇದರಿಂದ ಅಸಮಾಧಾನಗೊಂಡ ರಾಮುಲು, ಆರ್‍ಎಸ್‍ಎಸ್ ನಾಯಕರು ಹಾಗೂ ಕರೆ ಮಾಡು ಮೌಖಿಕ ದೂರು ಕೊಟ್ಟಿದ್ದಾರೆ. ಅಲ್ಲದೇ, ನಾನು ಚುನಾವಣೆ ಸೋಲಿನ ನೋವಲ್ಲಿ ಇದ್ದೇನೆ. ಇಂತಹ ಸಂದರ್ಭದಲ್ಲಿ ಈ ಆರೋಪ ಸರಿ ಇಲ್ಲ ಎಂದು ಹೇಳಿದ್ದಾರೆ.
ನಿಮಗೆ ಇಷ್ಟ ಇಲ್ಲ ಅಂತಾದರೆ ಬೇಕಾದರೆ ನಾನು ಪಕ್ಷ ಬಿಡುತ್ತೇನೆ ಆದರೆ ಪಕ್ಷ ಬಿಡುವ ಮುನ್ನ ಏನು ಆಗಿದೆ ಎಂದು ಹೇಳಿ ಪಕ್ಷ ತೊರೆಯುತ್ತೇನೆ.ಪ್ರ ಧಾನಿ ಮೋದಿ ಅಮಿತ್ ಶಾ ಹೈಕಮಾಂಡ್ ಎಲ್ಲರಿಗೂ ಏನು ಆಗಿದೆ ಎಂದು ಹೇಳುತ್ತೇನೆ. ನಾನು ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಇಲ್ಲಿ ಸುಮ್ಮನಿದ್ದರೆ ಕೆಲಸ ಮಾಡಿದವರಿಗೆ ಬೆಲೆ ಇಲ್ಲ ಎಂದು ಶ್ರೀರಾಮುಲು ಆಕ್ರೋಶ ಹೊರಹಾಕಿದ್ದಾರೆ.