ಬಿಜೆಪಿಗೆ ಶಾಕ್: ತೇಜಸ್ವಿನಿ ಗೌಡ ಕಾಂಗ್ರೆಸ್ ಸೇರ್ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆ (Lok Sabha Election) ಹೊತ್ತಲ್ಲಿ ಎಂಎಲ್‌ಸಿ (MLC) ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೇಜಸ್ವಿನಿ ಗೌಡ (Tejaswini Gowda) ಇದೀಗ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯಲ್ಲಿ (New Delhi) ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ಗೌಡ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಕೆಲವು ದಿನಗಳ ಹಿಂದಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸುಮಾರು ಹತ್ತು ವರ್ಷಗಳ ಹಿಂದೆ ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದಿದ್ದ ತೇಜಸ್ವಿನಿ ಅವರು ಈಗ ಮತ್ತೆ ಕಾಂಗ್ರೆಸ್‌ಗೆ ವಾಪಸ್ಸಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here