ಚೆನ್ನೈ ಸೂಪರ್​ ಕಿಂಗ್ಸ್​ ಗೆ ಶಾಕ್: ಸ್ಟಾರ್ ಆಟಗಾರ ಟೀಮ್ ನಿಂದ ಔಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಐಪಿಎಲ್​ ಪ್ರಾರಂಭಗೊಂಡು ಈಗಾಗಲೇ 32 ಪಂದ್ಯಗಳು ಮುಕ್ತಾಯಗೊಂಡಿದ್ದು, ಇದರ ಬೆನ್ನಲ್ಲೇ ಹಾಲಿ ಟೂರ್ನಿಯಲ್ಲಿ ಗಾಯದ ಸಮಸ್ಯೆ ಪ್ರಮುಖವಾಗಿ ಕಾಡುತ್ತಿದ್ದು, ತಂಡಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇದೀಗ ಗಾಯದ ಸಮಸ್ಯೆಯಿಂದ ಆಟಗಾರನೋರ್ವ ಟುರ್ನಿಯಿಂದ ಹೊರಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಹಾಲಿ ಆವೃತ್ತಿಯಲ್ಲಿ ಋತುರಾಜ್​ ನಾಯಕತ್ವದ ಚೆನ್ನೈ ಸೂಪರ್​ ಕಿಂಗ್ಸ್​ ತಂಡವು ಉತ್ತಮ ಪ್ರದರ್ಶನ ನೀಡುತ್ತಿದ್ದು, ಆಡಿರುವ ಆರು ಪಂದ್ಯಗಳ ಪೈಕಿ 4ರಲ್ಲಿ ಗೆದ್ದು ಎರಡರಲ್ಲಿ ಸೋತಿದೆ. ಇದರ ನಡುವೆ ಶಾಕ್​ ಎದುರಾಗಿದ್ದು, ತಂಡದ ಆರಂಭಿಕ ಆಟಗಾರ ಡೆವೊನ್​ ಕಾನ್ವೇ ಗಾಯದ ಸಮಸ್ಯೆಯಿಂದ ಹೊರಬಿದ್ದಿದ್ದಾರೆ.

ಐಪಿಎಲ್​ ಆರಂಭಕ್ಕೂ ಮುನ್ನ ಹೆಬ್ಬೆರಳು ಗಾಯಕ್ಕೆ ತುತ್ತಾಗಿದ್ದ ಕಾನ್ವೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ಅವರಿಗೆ ಕೆಲವು ವಾರಗಳ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿತ್ತು. ಹೀಗಾಗಿ ಅವರು ಐಪಿಎಲ್​ನ ಮೊದಲಾರ್ಧಕ್ಕೆ ಲಭ್ಯವಿರುವುದಿಲ್ಲ ಎಂದು ವರದಿಯಾಗಿತ್ತು. ಆದರೆ, ಕಾನ್ವೇ ಸಂಪೂರ್ಣವಾಗಿ ಗುಣಮುಖರಾಗದ ಕಾರಣ 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಕಾನ್ವೇ ಬದಲಿಯಾಗಿ ಸಿಎಸ್​ಕೆ, ಇಂಗ್ಲೆಂಡ್​ನ ರಿಚರ್ಡ್ ಗ್ಲೀಸನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!