ಕಾಂಗ್ರೆಸ್ ಶಾಸಕನಿಗೆ ಶಾಕ್: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಕೇಸ್ ತನಿಖೆಗೆ ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಸುಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ತೀವ್ರ ಸಂಕಷ್ಟ ಎದುರಾಗಿದ್ದು, ಹೈ ಕೋರ್ಟ್ ಪ್ರಕರಣದ ತನಿಖೆಗೆ ಸೂಚನೆ ನೀಡಿದೆ.

ಇಂದು ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ರದ್ದುಕೋರಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್‌ ಅವರ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್​ ಅಸ್ತು ಎಂದಿದೆ. ಎಫ್ಐಆರ್ ರದ್ದುಪಡಿಸಲು ನಿರಾಕರಿಸಿದೆ. ಅಲ್ಲದೇ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಆದೇಶಿಸಿದೆ.

ಕೇಸ್ ಹಿನ್ನೆಲೆ ಏನು?
ತಾವು ಪರಿಶಿಷ್ಟ ಜಾತಿಗಳ ಪಟ್ಟಿಗೆ ಬರುವ ಬುಡುಗ ಜಂಗಮ ಜಾತಿಗೆ ಸೇರಿದವರೆಂದು ಘೋಷಿಸಿಕೊಂಡು ಜಿ.ಮಂಜುನಾಥ್ ಅವರು 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಪರಿಶಿಷ್ಟ ಜಾತಿಗೆ ಸೇರಿರುವುದನ್ನು ಸಾಬೀತುಪಡಿಸಲು ವಿಫಲರಾದ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಹೈಕೋರ್ಟ್‌ 2018ರ ಏಪ್ರಿಲ್‌ನಲ್ಲಿ ಅಸಿಂಧುಗೊಳಿಸಿತ್ತು.

ಆ ತೀರ್ಪಿನ ವಿರುದ್ಧ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆ ಅರ್ಜಿ ವಜಾಗೊಳಿಸಿದ್ದ ಸುಪ್ರೀಂಕೋರ್ಟ್, ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನೆ ಸಮಿತಿ ಜಿ.ಮಂಜುನಾಥ್‌ ಅವರ ಜಾತಿಯನ್ನು ಪರಿಶೀಲಿಸಬೇಕು. ಸಮಿತಿಯ ನಿರ್ಣಯದ ಬಗ್ಗೆ ಆಕ್ಷೇಪವಿದ್ದರೆ ಪುನಃ ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಬಹುದು ಎಂದು ಆದೇಶಿಸಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!