February 16, 2026
Monday, February 16, 2026
spot_img

ಅಸ್ಸಾಂ ಚುನಾವಣಾ ಹೊಸ್ತಿಲಿನಲ್ಲಿ ಕಾಂಗ್ರೆಸ್ ಗೆ ಶಾಕ್: ಮಾಜಿ ಅಧ್ಯಕ್ಷ ಪಕ್ಷಕ್ಕೆ ಗುಡ್ ಬೈ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು, ಈಗಾಗಲೇ ರಾಜಕೀಯ ಪಕ್ಷಗಳು ಅಭ್ಯರ್ಥಿ ಆಯ್ಕೆ, ಗೆಲುವಿನ ರಣತಂತ್ರ ರಚಿಸುವಲ್ಲಿ ತೊಡಗಿದ್ದು, ಈ ನಡುವೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಾಕ್ ಎದುರಾಗಿದೆ.

ಅದೇನೆಂದರೆ ಹಿರಿಯ ನಾಯಕ ಮತ್ತು ಮಾಜಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿಕೊಟ್ಟಿದ್ದಾರೆ.

ಪತ್ರದಲ್ಲಿ, ಪಕ್ಷದ ನಾಯಕತ್ವವು ತಮ್ಮನ್ನು ನಿರ್ಲಕ್ಷಿಸಿದೆ ಮತ್ತು ರಾಜ್ಯ ಘಟಕದಲ್ಲಿ ಅವರಿಗೆ ಸರಿಯಾದ ಸ್ಥಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭೂಪೇನ್ ಬೋರಾ ಅವರು2021 ರಿಂದ 2025 ರ ವರೆಗೆ ಅಸ್ಸಾಂನ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ಶಾಸಕರಾಗಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !