Sunday, March 26, 2023

Latest Posts

ಕಾಂಗ್ರೆಸ್‌ ಗೆ ಶಾಕ್‌ : ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2023ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ನರಸಿಂಹರಾಜ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್​ ಸೇಠ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಪತ್ರ ಬರೆದಿದ್ದಾರೆ. ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ, ಸುರ್ಜೇವಾಲಗೂ ಪತ್ರ ಬರೆದಿದ್ದಾರೆ.

ʼಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲʼ ಎಂದು ಹೇಳಿದ್ದಾರೆ.

ತನ್ವೀರ್ ಸೇಠ್ ಮನೆ ಮುಂದೆ ಬೆಂಬಲಿಗರಿಂದ ಪ್ರತಿಭಟನೆ:

ತನ್ವೀರ್ ಸೇಠ್ ನಿವೃತ್ತಿ ಘೋಷಿಸಿ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ, ಮೈಸೂರಿನಲ್ಲಿ ತನ್ವೀರ್ ಸೇಠ್ ಮನೆ ಮುಂದೆ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ನಿವೃತ್ತಿ ಘೋಷಣೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!