ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸೆಂಬರ್‌ನ ಮೊದಲ ದಿನವೇ ಗ್ರಾಹಕರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ ಮಾಡಿದೆ.
ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡಿದ್ದು, ಇಂದಿನಿಂದಲೇ ಹೊಸ ದರ ಅನ್ವಯವಾಗಲಿದೆ.
19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1796.50 ರೂಪಾಯಿಗೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,904ರೂಪಾಯಿಗಳಾಗಿದೆ. 14.2 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.