ಕೋಟಿ ಒಡೆಯ ಕೆಜಿಎಫ್‌ ಬಾಬು ಗೆ ಶಾಕ್: ಕಾಂಗ್ರೆಸ್ ಪಕ್ಷದಿಂದ ಗೇಟ್ ಪಾಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೋಟಿ ಒಡೆಯ ಕೆಜಿಎಫ್‌ ಬಾಬು ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿದೆ.

ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಕೆಜಿಎಫ್​ ಬಾಬು ಅವರನ್ನು ಅಮಾನತುಗೊಳಿಸಿ ಕೆಪಿಸಿಸಿ ಶಿಸ್ತು ಸಮಿತಿ ಇಂದು(ಜನವರಿ 06) ಆದೇಶ ಹೊರಡಿಸಿದೆ.

ಕೆಜಿಎಫ್​ ಬಾಬು ಈ ಹಿಂದೆ ನೀಡಲಾಗಿದ್ದ 3 ಶೋಕಾಸ್​ ನೋಟಿಸ್​ಗೆ ಉತ್ತರ ನೀಡಿರಲಿಲ್ಲ. ಇದೀಗ ಅಂತಿಮವಾಗಿ ಪಕ್ಷದಿಂದ ಅಮಾನತು ಮಾಡಿ ಕೆಪಿಸಿಸಿ ಶಿಸ್ತು ಸಮಿತಿ ಮುಖ್ಯಸ್ಥ ರಹಮಾನ್ ಖಾನ್ ಆದೇಶಿಸಿದ್ದಾರೆ.

ಕಾಂಗ್ರೆಸ್ ನವರು ಅತಿಯಾದ ಆತ್ಮವಿಶ್ವಾಸದಲ್ಲಿ ಇದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ಸೀಟ್ ಬರಲ್ಲ ಎಂದ‌ ಕೆಪಿಸಿಸಿ ಕಚೇರಿಯಲ್ಲೇ ಕೆಜಿಎಫ್ ಬಾಬು ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.
ಕೆಜಿಎಫ್ ಬಾಬು ಹಾಗೂ ಕಾಂಗ್ರೆಸ್‌ ಮುಖಂಡ ಮನೋಹರ್ ನಡುವೆ ಕೆಪಿಸಿಸಿ ಕಚೇರಿಯಲ್ಲಿ ಜಟಾಪಟಿ ನಡೆದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!