ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಶಾಕ್: ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಆರ್‌ಪಿಪಿ (KRPP) ಪಕ್ಷ ಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ (Janardhan Reddy) ಸುಪ್ರೀಂಕೋರ್ಟ್‌ (Supreme Court) ಶಾಕ್ ನೀಡಿದ್ದು,ಪತ್ನಿ ಅರುಣಾ ಪರ ಪ್ರಚಾರ ಮಾಡುವ ಲೆಕ್ಕಚಾರದಲ್ಲಿದ್ದ ರೆಡ್ಡಿಗೆ ಬಳ್ಳಾರಿಗೆ (Ballari) ಪ್ರವೇಶವನ್ನು ನಿರಾಕರಿಸಿದೆ.

ರಾಜ್ಯ ವಿಧಾನಸಭೆ ಚುನಾವಣೆ (Karnataka Election) ಹಿನ್ನಲೆ ಬಳ್ಳಾರಿ ತೆರಳಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಜನಾರ್ದನ ರೆಡ್ಡಿ ಮುಂದಾಗಿದ್ದರು. ಈ ಹಿನ್ನಲೆ ಬಳ್ಳಾರಿ ಪ್ರವೇಶಕ್ಕೆ ನೀಡಿರುವ ಅನುಮತಿಯನ್ನು ವಿಸ್ತರಿಸಬೇಕು ಎಂದು ಸುಪ್ರೀಂಗೆ ಮನವಿ ಮಾಡಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ ಆರ್ ಶಾ ನೇತೃತ್ವದ ದ್ವಿಸದಸ್ಯ ಪೀಠ ಅನುಮತಿ ನಿರಾಕರಿಸಿತು.

ವಾದ ಮಂಡಿಸಿದ ಹಿರಿಯ ವಕೀಲೆ ಮೀನಾಕ್ಷಿ ಅರೋರಾ, ರೆಡ್ಡಿ ಮೊಮ್ಮಗಳ ಜನನ ಹಿನ್ನಲೆ ಬಳ್ಳಾರಿ ತೆರಳಲು ಅನುಮತಿ ನೀಡಿತ್ತು.

ಜನಾರ್ದನ ರೆಡ್ಡಿಗೆ ವಿಧಿಸಿದ್ದ ಜಾಮೀನು ಷರತ್ತುಗಳನ್ನು ಸಡಿಲಗೊಳಿಸಿತ್ತು. ಅದನ್ನು ಸದ್ಯ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಅನುಮತಿ ನಿರಾಕರಿಸಿ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ರೆಡ್ಡಿ ಪರ ವಕೀಲರು ಅರ್ಜಿಯನ್ನು ವಾಪಸ್ ಪಡೆದರು.

ಇದರಿಂದ ಬಳ್ಳಾರಿಗೆ ತೆರಳುವ ಅವಕಾಶದಿಂದ ವಂಚಿತರಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಪತ್ನಿ ಅರುಣಾ ಸೇರಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡದಂತಹ ಪರಿಸ್ಥಿತಿಯಲ್ಲಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!