ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಐಪಿಎಲ್ ಟೂರ್ನಿ ಭರ್ಜರಿಯಾಗಿ ಶುರುವಾಗಿದ್ದು, ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿ ಟೂರ್ನಿ ಆರಂಭಿಸಿದೆ.
ಇದರ ನಡುವೆ ಗುಜರಾತ್ ಟೈಟಾನ್ಸ್ ತಂಡಕ್ಕೆ ತಲೆನೋವು ಹೆಚ್ಚಾಗಿದೆ. ಫೀಲ್ಡಿಂಗ್ ವೇಳೆ ಗಾಯಗೊಂಡ ಕೇನ್ ವಿಲಿಯಮ್ಸನ್ ಸಂಪೂರ್ಣ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
2022ರ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ 2 ಕೋಟಿ ರೂಪಾಯಿ ನೀಡಿ ಕೇನ್ ವಿಲಿಯಮ್ಸನ್ ಖರೀದಿಸಿತ್ತು. ಆದರೆ ಮೊಣಕಾಲಿನ ಗಾಯದಿಂದ ವಿಲಿಯಮ್ಸನ್ ಟೂರ್ನಿಗೆ ಅಲಭ್ಯರಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಸಿಡಿಸಿದ ಸಿಕ್ಸರ್ ತಡೆಯಲು ಹೋದ ಕೇನ್ ವಿಲಿಯಮ್ಸನ್ ಮೊಣಕಾಲಿಗೆ ಗಾಯಮಾಡಿಕೊಂಡಿದ್ದರು. ತಕ್ಷಣವೇ ಕೇನ್ ವಿಲಿಯಮ್ಸನ್ ಪಂದ್ಯದಿಂದ ಹೊರಗುಳಿದಿದ್ದರು. ಇಂಪಾಕ್ಟ್ ಪ್ಲೇಯರ್ ಮೂಲಕ ಸಾಯಿ ಸುದರ್ಶನ್ ತಂಡ ಸೇರಿಕೊಂಡಿದ್ದರು.
ಇದೀಗ ಕೇನ್ ವಿಲಿಯಮ್ಸನ್ ಟೂರ್ನಿಯಿಂದ ಹೊರಬಿದ್ದಿರುವುದು ಗುಜರಾತ್ ತಂಡದ ಸಮತೋಲನಕ್ಕೆ ಹೊಡೆತ ನೀಡಿದೆ.