I.N.D.I.A ಮೈತ್ರಿ ಕೂಟಕ್ಕೆ ಶಾಕ್: ಚಂಡೀಘಡ ಮೇಯರ್ ಚುನಾವಣೆ ಗೆದ್ದ ಬಿಜೆಪಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಂಡೀಘಡ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜ್ ಸೊಂಕರ್ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಆಮ್ ಆದ್ಮಿ ಪಾರ್ಟಿ ಹಾಗೂ ಕಾಂಗ್ರೆಸ್ ಮೈತ್ರಿಗೆ ತೀವ್ರ ಮುಖಭಂಗವಾಗಿದೆ.

ಚಂಡೀಘಡ ಚುನಾವಣೆಯಲ್ಲಿ ಆಪ್ ಅಭ್ಯರ್ಥಿ ಗೆಲುವು ಬಹುತೇಕ ಖಚಿತವಾಗಿತ್ತು. ಆದರೆ ಅಂತಿಮ ಹಂತದಲ್ಲಿ ಅಚ್ಚರಿ ನಡೆದಿದೆ. ಬಿಜೆಪಿ ಅಭ್ಯರ್ಥಿ ಮನೋಜ್ ಸೊಂಕರ್ ಗೆಲುವು ದಾಖಲಿಸಿದ್ದಾರೆ.

ಇತ್ತ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಬಿಜೆಪಿ ಕಚೇರಿ ಎಂದು ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಬಿಜೆಪಿ ಅಭ್ಯರ್ಥಿ ಸೋಂಕರ್ 16 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಕುಲ್ದೀಪ್ ಕುಮಾರ್ 12 ಮತಗಳನ್ನು ಪಡೆದು ಸೋಲಿಗೆ ಶರಣಾಗಿದ್ದಾರೆ. ಇನ್ನು 8 ಮತಗಳನ್ನು ಅಸಿಂಧು ಎಂದು ಘೋಷಿಸಲಾಗಿದೆ.
ಅಸಿಂಧು ನಿರ್ಧಾರ ಪ್ರಶ್ನಿಸಿ ಆಮ್ ಆದ್ಮಿ ಪಾರ್ಟಿ ಹಾಗೂ ಕಾಂಗ್ರೆಸ್ ಭಾರಿ ಪ್ರತಿಭಟನೆ ನಡೆಸಿದೆ.

14 ಕೌನ್ಸಿಲರ್ಸ್ ಸಂಖ್ಯಾಬಲ ಹೊಂದಿದ ಬಿಜೆಪಿ, ಆಪ್ ಹಾಗೂ ಕಾಂಗ್ರೆಸ್ ಮೈತ್ರಿಯನ್ನು ಸೋಲಿಸಿ ಮೇಯರ್ ಸ್ಥಾನ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆಪ್ ಬಳಿ 13 ಹಾಗೂ ಕಾಂಗ್ರೆಸ್ ಬಳಿ 7 ಕೌನ್ಸಿಲರ್ಸ್ ಬಲವಿತ್ತು. ಅದರೂ ಬಿಜೆಪಿ ಗೆಲುವಿನ ನಗೆ ಬೀರಿದೆ.

ಫಲಿತಾಂಶದ ಬೆನ್ನಲ್ಲೇ ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗರಂ ಆಗಿದ್ದಾರೆ. ಬಿಜೆಪಿ ಮೋಸದ ಮೂಲಕ ಮೇಯರ್ ಸ್ಥಾನ ಗೆದ್ದುಕೊಂಡಿದೆ ಎಂದು ಆರೋಪಿಸಿದ್ದಾರೆ. ಮೇಯರ್ ಚುನಾವಣೆಯಲ್ಲಿ ಮೋಸ ಮಾಡಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲೂ ಮೋಸ ಮಾಡಲಿದೆ ಅನ್ನೋದು ಖಚಿತ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!