ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಐಪಿಎಲ್ 14ನೇ ಆವೃತ್ತಿಯ ಉಳಿದ ಆಟ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಇದರ ನಡುವೆ ಪಂಜಾಬ್ ಕಿಂಗ್ಸ್ ನ ಮಲಾನ್, ಸನ್ ರೈಸರ್ಸ್ ಹೈದರಾಬಾದ್ ತಂಡದ ಜಾನಿ ಬೇರಿಸ್ಟೋ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ರಿಸ್ ವೋಕ್ಸ್ ಐಪಿಎಲ್ ನಲ್ಲಿ ಆಡದಿರಲು ನಿರ್ಧರಿಸಿದ್ದಾರೆ.
ಕೋವಿಡ್ ಕಾರಣದಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯವಾಡಲು ಹಿಂದೇಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಟೆಸ್ಟ್ ಪಂದ್ಯವನ್ನು ರದ್ದು ಮಾಡಲಾಗಿದೆ. ಭಾರತೀಯ ಆಟಗಾರರ ಈ ನಡೆಯಿಂದ ಇಂಗ್ಲೆಂಡ್ ಆಟಗಾರರು ಕೋಪಗೊಂಡಿದ್ದಾರೆ ಎನ್ನಲಾಗಿದ್ದು, ಹೀಗಾಗಿ ಐಪಿಎಲ್ ಯಿಂದ ದೂರ ಉಳಿಯಲು ನಿರ್ಧಾರ ಕೈಗೊಂಡಿದ್ದಾರೆ.
ಪಂಜಾಬ್ ಕಿಂಗ್ಸ್ ತಂಡವು ಡೇವಿಡ್ ಮಲಾನ್ ಬದಲು ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಏಡನ್ ಮಾಕ್ರಮ್ ಅವರನ್ನು ಸೇರ್ಪಡೆ ಮಾಡಿಕೊಂಡಿದೆ.
ಆದರೆ ಟಿ20 ವಿಶ್ವಕಪ್ ಗೂ ಮೊದಲು ತನ್ನ ಕುಟುಂಬದೊಂದಿಗೆ ಸಮಯ ಕಳೆಯಲು ನಿರ್ಧರಿಸಿದ ಕಾರಣಕ್ಕೆ ಮಲಾನ್ ಕೂಟದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಹೇಳಿದೆ.