Monday, September 22, 2025

ಜಾಕ್ವೆಲಿನ್ ಫರ್ನಾಂಡಿಸ್‌ಗೆ ಶಾಕ್: ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ‘ಸುಪ್ರೀಂ’ ನಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇಸಿಐಆರ್ (ಎಫ್‌ಐಆರ್‌ಗೆ ಸಮ) ರದ್ದುಗೊಳಿಸುವಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ದೀಪಾಂಕರ್ ದತ್ತಾ ಮತ್ತು ಅಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಫರ್ನಾಂಡಿಸ್ ಅವರಿದ್ದ ಪೀಠವು
‘ಈ ಹಂತದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ’ ಎಂದು ತಿಳಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ಪ್ರಕರಣ ಮಾಹಿತಿ ವರದಿ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಜುಲೈ 3ರ ದೆಹಲಿ ಹೈಕೋರ್ಟ್ ಆದೇಶವನ್ನು ಜಾಕ್ವೆಲಿನ್ ಫರ್ನಾಂಡಿಸ್ ಅವರು ಪ್ರಶ್ನಿಸಿದ್ದರು.

ಇದನ್ನೂ ಓದಿ