ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧದ ದೂರಿನ ಕುರಿತು ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ಖರ್ಗೆ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(KIADB) ಸಿಎ ನಿವೇಶನದ ನೀಡಿದ ಪ್ರಕರಣದ ವಿವರ ಕೊಡಿ ಎಂದು ಆದೇಶಿಸಿದ್ದಾರೆ.
ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದೂರು ನೀಡಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೆಚ್ಚಿನ ವಿವರಣೆ ನೀಡುವಂತೆ ಸೂಚಿಸಿದ್ದಾರೆ.