ಐಪಿಎಲ್ ಆರಂಭಕ್ಕೂ ಮುನ್ನವೇ KKR ಗೆ ಶಾಕ್: ಅಯ್ಯರ್ ಬಳಿಕ ಮತ್ತೊಬ್ಬ ಸ್ಟಾರ್ ಆಟಗಾರನಿಗೆ ಇಂಜುರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಐಪಿಎಲ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದರ ಬೆನ್ನಲ್ಲೇ ಇತ್ತ ಫ್ರಾಂಚೈಸಿಗಳಿಗೆ ಆಟಗಾರರ ಇಂಜುರಿ ಸಮಸ್ಯೆ ತಲೆನೋವು ತಂದ್ದೊಡ್ಡಿದೆ.

ಲವಾರು ಪ್ರಮುಖ ಆಟಗಾರರು ಪಂದ್ಯಾವಳಿಯಿಂದ ಹಿಂದೆ ಸರಿದಿದ್ದಾರೆ. ಇದೀಗ ಟೂರ್ನಿ ಆರಂಭಕ್ಕೆ ದಿನಗಳು ಹತ್ತಿರವಾದಂತೆ ದೇಶಿ ಆಟಗಾರರು ಸೇರಿದಂತೆ ಹಲವು ವಿದೇಶಿ ಆಟಗಾರರು ಇಂಜುರಿಗೆ ತುತ್ತಾಗುವುದರೊಂದಿಗೆ ಫ್ರಾಂಚೈಸಿಗಳಿಗೆ ಸಂಕಷ್ಟ ಹೆಚ್ಚಿಸಿದ್ದಾರೆ.

ಕೆಲವು ದಿನಗಳ ಹಿಂದೆ ಕೆಕೆಆರ್ (KKR) ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಇಂಜುರಿಯಿಂದಾಗಿ ಇಡೀ ಐಪಿಎಲ್​ನಿಂದಲೇ ಹೊರಬಿದ್ದಿದ್ದರು. ಇದೀಗ ತಂಡದ ಸ್ಟಾರ್ ವೇಗದ ಬೌಲರ್ ಲಾಕಿ ಫರ್ಗುಸನ್ (Lockie Ferguson) ಗಾಯಗೊಂಡಿರುವುದು ತಂಡದ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಇಂಜುರಿಗೆ ತುತ್ತಾದರು. ಆದ್ದರಿಂದ, ನಾಲ್ಕನೇ ಟೆಸ್ಟ್‌ನಲ್ಲಿ ಮೊದಲ ದಿನ ಕಣಕ್ಕಿಳಿದಿದ್ದ ಅಯ್ಯರ್, ಆನಂತರ ತಂಡದ ಪರ ಬ್ಯಾಟಿಂಗ್ ಮಾಡಲು ಸಹ ಮೈದಾನಕ್ಕೆ ಬರಲಿಲ್ಲ. ವಾಸ್ತವವಾಗಿ ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದಾಗಿ ನಾಗ್ಪುರದಲ್ಲಿ ನಡೆದ ಈ ಸರಣಿಯ ಮೊದಲ ಟೆಸ್ಟ್‌ನಲ್ಲಿಯೂ ಆಡಿರಲಿಲ್ಲ. ಇದೀಗ ಅವರು ಐಪಿಎಲ್‌ನಿಂದ ಹೊರಬಿದ್ದಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಇದೀಗ ತಂಡದ ವೇಗದ ಬೌಲರ್ ಲಾಕಿ ಫರ್ಗುಸನ್ ಗಾಯಗೊಂಡಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ. ಫರ್ಗುಸನ್ ಮಂಡಿರಜ್ಜು ಸಮಸ್ಯೆಯಿಂದ ಬಳಲುತ್ತಿದ್ದು, ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಇದೀಗ ಇಂಜುರಿಗೆ ತುತ್ತಾಗಿರುವ ಫರ್ಗುಸನ್, ಐಪಿಎಲ್ ಆರಂಭಕ್ಕೂ ಮುನ್ನ ಚೇತರಿಸಿಕೊಳ್ಳದಿದ್ದರೆ, ತಂಡದ ಆರಂಭಿಕ ಕೆಲವು ಪಂದ್ಯಗಳಿಗೆ ಅಲಭ್ಯರಾಗುವುದು ಖಚಿತ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!