ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾರಂಟಿ ಯೋಜನೆ ಘೋಷಿಸಿರುವ ಕಾಂಗ್ರೆಸ್ ಸರ್ಕಾರ ಮದ್ಯಪ್ರಿಯರಿಗೆ ಮಾತ್ರ ಶಾಕ್ ಮೇಲೆ ಶಾಕ್ ಕೊಡುತ್ತಿದೆ. ಈ ಬಾರಿ ಬಜೆಟ್‌ನಲ್ಲಿ ಸಿದ್ದರಾಮಯ್ಯ ಸರ್ಕಾರ ಅಬಕಾರಿ ಸುಂಕ ಹೆಚ್ಚಳ ಮಾಡಿದ್ದು, ಮದ್ಯಪ್ರಿಯರಿಗೆ ತಲೆ ನೋವಾಗಿ ಪರಿಣಮಿಸಲಿದೆ.
ಹಾಲಿ ದರದ ಮೇಲೆ 20% ಸುಂಕ ಹೆಚ್ಚಳ ಮಾಡಲಾಗಿದ್ದು, ಬಿಯರ್ ಮೇಲೆ ಶೇ. 175 ರಿಂದ 185ಕ್ಕೆ ಏರಿಸಲಾಗಿದೆ.