ಮನೀಶ್‌ ಸಿಸೋಡಿಯಾಗೆ ಶಾಕ್: 7 ದಿನ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯ 7 ದಿನಗಳ ಕಾಲ ಜಾರಿ ನಿರ್ದೇಶನಾಲಯದ (Enforcement Directorate) ವಶಕ್ಕೆ ಒಪ್ಪಿಸಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಮನೀಶ್ ಸಿಸೋಡಿಯಾ ಅವರನ್ನು ಗುರುವಾರ ಇ.ಡಿ ಜೈಲಿನಿಂದಲೇ ಬಂಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನ್ಯಾಯಾಲಯದಿಂದ ಸೀಸೋಡಿಯಾ ಜಾಮೀನು ಕೋರಿರುವ ಮಧ್ಯೆಯೇ ಮತ್ತೆ ಅವರ ಬಂಧನವಾಗಿದೆ.
ಈ ಮಧ್ಯೆ, ಸಿಬಿಐ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಸಿಸೋಡಿಯಾ ವಿರುದ್ಧದ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 21ಕ್ಕೆ ನಿಗದಿಪಡಿಸಿದೆ.

10 ದಿನಗಳ ಕಾಲ ಸಿಸೋಡಿಯಾ ಅವರನ್ನು ಕಸ್ಟಡಿಗೆ ನೀಡಬೇಕು ಎಂದು ಇ.ಡಿ ಮನವಿ ಮಾಡಿತ್ತು. ಮದ್ಯ ನೀತಿಗೆ ಸಂಬಂಧಿಸಿದ ಸಂಪೂರ್ಣ ಹಗರಣವು ಸಿಸೋಡಿಯಾ ಮತ್ತು ಇತರರು ರೂಪಿಸಿದ್ದ ಕರಡು ನೀತಿಯೊಂದಿಗೆ ಪ್ರಾರಂಭವಾಗಿತ್ತು.
ಸಿಸೋಡಿಯಾ ಅವರನ್ನು ಸಿಬಿಐ ಫೆಬ್ರವರಿ 26 ರಂದು ಬಂಧಿಸಿತ್ತು. ನಂತರ ಅವರು ಸಿಬಿಐ ವಶದಲ್ಲೇ ಇದ್ದರು. ಸಿಬಿಐ ಕಸ್ಟಡಿ ಮುಗಿದ ನಂತರ ಅವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಈ ಮಧ್ಯೆ ಅವರು ಸಿಬಿಐ ಬಂಧಿಸಿರುವ ಪ್ರಕರಣದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಇ.ಡಿ ಅವರನ್ನು ಬಂಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!