September 12, 2026
Saturday, September 12, 2026
spot_img

ಮಾಂಸ ಪ್ರಿಯರಿಗೆ ಶಾಕ್: ಸೆಪ್ಟೆಂಬರ್ 14 ರಂದು ಬೆಂಗಳೂರಿನಾದ್ಯಂತ ಚಿಕನ್, ಮಟನ್ ಮಾರಾಟ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆ.14ರ ಸೋಮವಾರ ಬೃಹತ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚಿಕನ್, ಮಟನ್ ಅಂಗಡಿಗಳು ಹಾಗೂ ಕಸಾಯಿಖಾನೆಗಳು ಅಂದು ಪೂರ್ತಿ ಬಂದ್ ಇರಲಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಸೋಮವಾರ ಏನೆಲ್ಲಾ ಬಂದ್?

ಚಿಕನ್, ಮಟನ್ ಹಾಗೂ ಮೀನು ಮಾರಾಟ ಮಾಡುವ ಎಲ್ಲಾ ಅಂಗಡಿಗಳು ಸೋಮವಾರ ಪೂರ್ತಿ ಬಾಗಿಲು ಮುಚ್ಚಲಿವೆ. ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸೂಪರ್ ಮಾರ್ಕೆಟ್ ಸೇರಿದಂತೆ ಮಾಂಸ ಮಾರಾಟ ಮಾಡುವ ಯಾವುದೇ ಸಂಸ್ಥೆಗಳು ಅಂದು ವಹಿವಾಟು ನಡೆಸುವಂತಿಲ್ಲ.

GBA ವ್ಯಾಪ್ತಿಯಲ್ಲಿ ನಿಯಮ ಕಡ್ಡಾಯ

ಬೃಹತ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯೊಳಗೆ ಬರುವ ಎಲ್ಲಾ ಪ್ರದೇಶಗಳಿಗೂ ಈ ನಿಯಮ ಅನ್ವಯವಾಗಲಿದೆ. ಹಬ್ಬದ ದಿನದಂದು ನಿಯಮ ಉಲ್ಲಂಘಿಸಿ ಕದ್ದುಮುಚ್ಚಿ ಮಾಂಸ ಮಾರಾಟ ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರ ಎಚ್ಚರಿಸಿದೆ. ಆದ್ದರಿಂದ ವ್ಯಾಪಾರಿಗಳು ಸೋಮವಾರ ತಮ್ಮ ವ್ಯಾಪಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕಿದೆ.

ಇದನ್ನೂ ಓದಿ:

ಸಾರ್ವಜನಿಕರು ಹಾಗೂ ಮಾಂಸದ ವ್ಯಾಪಾರಿಗಳು ಹಬ್ಬದ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಪ್ರಾಧಿಕಾರದೊಂದಿಗೆ ಸಹಕರಿಸಬೇಕಾಗಿ ಅಧಿಕಾರಿಗಳು ವಿನಂತಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !