ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತ್ತೆ ಬೆಂಗಳೂರಿನ ನಮ್ಮ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆಯಿದೆ. ಫೆಬ್ರವರಿಯಿಂದ ನಮ್ಮ ಮೆಟ್ರೋ ದರವನ್ನು ಏರಿಕೆ ಮಾಡಲು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ ಮುಂದಾಗಿದೆ.
2025 ರಲ್ಲಿ 71% ದರವನ್ನು ಏರಿಕೆ ಮಾಡಲಾಗಿತ್ತು. ಆದರೆ ಈಗ 5% ದರ ಏರಿಕೆಗೆ ಸಿದ್ಧತೆ ನಡೆಯುತ್ತಿದೆ. ಶುಲ್ಕ ನಿಗದಿ ಸಮಿತಿ ಪ್ರತಿ ವರ್ಷ ಟಿಕೆಟ್ ಶುಲ್ಕದಲ್ಲಿ 5% ರಷ್ಟು ಹೆಚ್ಚಳವನ್ನು ಸೂಚಿಸಿದ ಕಾರಣ ಏರಿಕೆಯಾಗಲಿದೆ.
ಮೆಟ್ರೋ ರೈಲು ನಿರ್ವಹಣೆ ಕಾಯ್ದೆ 2002 ರ 33 ರ ಅಡಿಯಲ್ಲಿ ಕಾನೂನುಬದ್ಧವಾಗಿ ಬದ್ಧವಾಗಿರುವ FFC ಯ ಶಿಫಾರಸುಗಳ ಆಧಾರದ ಮೇಲೆ ಪ್ರತಿ ವರ್ಷ ದರ ಏರಿಕೆ ಮಾಡಲು ಅವಕಾಶವಿದೆ.

