ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಆರೋಪದಲ್ಲಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಪ್ರಕರಣದಲ್ಲಿ 42ನೇ ಎಸಿಎಂಎಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಕೆ.ಎನ್. ಶಿವಕುಮಾರ್ ಅವರಿದ್ದ ಪೀಠ ಶಾಸಕ ಮುನಿರತ್ನ ಅವರನ್ನು ಅಕ್ಟೋಬರ್ 5 ರವರೆಗೂ SIT ಕಸ್ಟಡಿಗೆ ನೀಡಿ ಆದೇಶ ನೀಡಿದೆ.
ಸರ್ಕಾರ ಜಾತಿ ನಿಂದನೆ, ಅ*ತ್ಯಾಚಾರ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈ ಪ್ರಕರಣದ ವಿಚಾರಣೆಗೆ ವಿಶೇಷ ತನಿಖಾ ತಂಡವನ್ನು ನೇಮಿಸಿತ್ತು.
ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡು ವಿಶೇಷ ತನಿಖಾ ತಂಡವು ಶಾಸಕ ಮುನಿರತ್ನ ಅವರನ್ನು ಕಸ್ಟಡಿಗೆ ನೀಡುವಂತೆ ಕೇಳಿತ್ತು. ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಿತ್ತು. ಇಂದು ಮುನಿರತ್ನ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಶಾಸಕ ಮುನಿರತ್ನ ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.