ಮುಂಬೈಗೆ ಶಾಕ್: ಐಪಿಎಲ್ ಟೂರ್ನಿಯಿಂದ ಜಸ್ಪ್ರೀತ್ ಬುಮ್ರಾ ಔಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ 2023ರ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಕಳೆದ ಒಂದು ವರ್ಷದಿಂದ ಬೆನ್ನು ನೋವಿನ ಗಾಯದಿಂದ ಕ್ರಿಕೆಟ್‌ನಿಂದ ದೂರ ಉಳಿದಿರುವ ಬುಮ್ರಾ ಮತ್ತೆ ಶಸ್ತ್ರಚಿಕಿತ್ಸೆಗೆ ಒಳಪಡುವ ಸಾಧ್ಯತೆ ಇದೆ.
ಒಂದು ವೇಳೆ ಭಾರತ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆದರೆ, ಜೂನ್‌ನಲ್ಲಿ ನಡೆಯಲಿರುವ ಈ ಪಂದ್ಯದಿಂದಲೂ ಬುಮ್ರಾ ಹೊರಗುಳಿಯುವ ಸಾಧ್ಯತೆ ಇದೆ.
ಬೆನ್ನು ನೋವು ಉಲ್ಬಣಿಸಿದ ಕಾರಣ ಕಳೆದ ವರ್ಷ ಏಷ್ಯಾಕಪ್ ಟೂರ್ನಿಯಿಂದ ಜಸ್ಪ್ರೀತ್ ಬುಮ್ರಾ ಹೊರಬಿದ್ದಿದ್ದರು. ಸೆಪ್ಟೆಂಬರ್ ತಿಂಗಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ದದ ಟಿ20 ಸರಣಿ ಮೂಲಕ ಬುಮ್ರಾ ಕಮ್ ಬ್ಯಾಕ್ ಪ್ರಯತ್ನ ಮಾಡಿದ್ದರು. ಆದರೆ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಮತ್ತೆ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶದ ಸರಣಿಯಿಂದಲೂ ಹೊರಬಿದ್ದರು. ಸರಿಸುಮಾರು ಒಂದು ವರ್ಷದಿಂದ ಬುಮ್ರಾ ಟೀಂ ಇಂಡಿಯಾದಿಂದ ದೂರ ಉಳಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!