ಸಂಗೀತ ನಿರ್ದೇಶಕ ಗುರುಕಿರಣ್ ಗೆ ಶಾಕ್: ಬೀರುವಿನಲ್ಲಿದ್ದ 2.50 ಲಕ್ಷ ರೂ. ಗಾಯಬ್

ಹೊಸದಿಂಗತ ಡಿಜಿಟಲ್ ಡೆಸ್ಕ್:

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್​ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ವರ್ಷ ಡಿ. 31ರಂದು ಮಧ್ಯಾಹ್ನ ತಮ್ಮ ರೂಂನ ಬೀರುವಿನಲ್ಲಿ 2.50 ಲಕ್ಷ ರೂ. ಹಣವನ್ನು ಇಟ್ಟಿದ್ದರು. ಆದರೆ ಜನವರಿ 5ರಂದು ಹಣ ಕಳ್ಳತನವಾಗಿದೆ. ಎರಡು ದಿನಗಳ ಕಾಲ ಕುಟುಂಬಸ್ಥರು ಮನೆಯೆಲ್ಲ ಹುಡುಕಾಡಿದ್ದಾರೆ.

ಎಷ್ಟು ಹುಡುಕಾಡಿದರೂ ಹಣ ಸಿಗದೇ ಇದ್ದಾಗ ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ.

ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು. ಮನೆ ಕೆಲಸದವರ ಮೇಲೆ ಗುರುಕಿರಣ್​ರವರ ಅತ್ತೆ ಕಸ್ತೂರಿ ಶೆಟ್ಟಿ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ, ಸದ್ಯ ಮನೆ ಕೆಲಸದಾಕೆ ರತ್ನಮ್ಮ ಅವರನ್ನು ವಿಚಾರಣೆ ನಡೆಸಿರುವ ಚಂದ್ರಲೇಔಟ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!