ಪಾಕ್ ಕ್ರಿಕೆಟ್ ತಂಡಕ್ಕೆ ಶಾಕ್: ಸ್ಟಾರ್ ವೇಗಿ ಏಷ್ಯಾಕಪ್ ಟೂರ್ನಿಯಿಂದ ಔಟ್ !

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾಕಪ್ ಟೂರ್ನಿಯಲ್ಲಿರುವ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಶಾಕ್ ಎದುರಾಗಿದ್ದು, ಸ್ಟಾರ್ ವೇಗಿ ಏಷ್ಯಾಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡವು ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದಲ್ಲಿ ಭಾರತ ಎದುರು ಹೀನಾಯ ಸೋಲು ಅನುಭವಿಸಿದೆ.

ಇದೀಗ ಪಾಕಿಸ್ತಾನ ತಂಡವು ಸೆಪ್ಟೆಂಬರ್ 14ರಂದು ನಡೆಯಲಿರುವ ವರ್ಚುವಲ್ ಸೆಮಿಫೈನಲ್ ಎನಿಸಿಕೊಂಡಿರುವ ಶ್ರೀಲಂಕಾ ಎದುರಿನ ಪಂದ್ಯದಲ್ಲಿ ಬಾಬರ್ ಅಜಂ ಪಡೆ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.ಹೀಗಿರುವಾಗಲೇ ಪಾಕಿಸ್ತಾನ ತಂಡದ ಮಾರಕ ವೇಗಿ ನಸೀಂ ಶಾ, ಭುಜದ ಗಾಯಕ್ಕೆ ತುತ್ತಾಗಿದ್ದು, ಇನ್ನುಳಿದ ಏಷ್ಯಾಕಪ್ ಟೂರ್ನಿಯ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ಭಾರತೆ ಎದುರಿನ ಪಂದ್ಯದ ವೇಳೆಯಲ್ಲೇ ನಸೀಂ ಶಾ ಭುಜದ ನೋವಿಗೆ ಒಳಗಾಗಿದ್ದು, ಏಷ್ಯಾಕಪ್ ಟೂರ್ನಿಯಿಂದ ಪಾಕಿಸ್ತಾನ ತಂಡದಿಂದ ಹೊರಬಿದ್ದಿದ್ದಾರೆ, ಇದೀಗ ನಸೀಂ ಶಾ ಬದಲಿಗೆ ವೇಗಿ ಜಮಾನ್ ಖಾನ್ ಪಾಕ್ ತಂಡ ಕೂಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!