ಭಾರತಕ್ಕೆ ಹೊರಟ ಪಾಕ್ ಕ್ರಿಕೆಟರ್ ಗಳಿಗೆ ಶಾಕ್: ವೀಸಾ ನಿರಾಕರಿಸಿದ ವಿದೇಶಾಂಗ ಸಚಿವಾಲಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದಲ್ಲಿ ನಡೆಯುತ್ತಿರುವ ಅಂಧರ ಕ್ರಿಕೆಟ್‌ ತಂಡಗಳ ವಿಶ್ವ ಕಪ್‌ನಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದ ಪಾಕಿಸ್ತಾನ ತಂಡದ ಶಾಕ್ ಆಗಿದ್ದು, ಭಾರತದ ವಿದೇಶಾಂಗ ಸಚಿವಾಲಯ ವೀಸಾ ಅರ್ಜಿಯನ್ನು ತಳ್ಳಿ ಹಾಕಿದೆ.

ನಮಗೆ ಭಾರತದ ವೀಸಾ ಸಿಕ್ಕಿಲ್ಲ ಎಂಬುದಾಗಿ ಪಾಕಿಸ್ತಾನ ಅಂಧರ ಕ್ರಿಕೆಟ್‌ ತಂಡದ ಮ್ಯಾನೇಜ್ಮೆಂಟ್‌ ಮಾಹಿತಿ ನೀಡಿದೆ.
ಪಾಕಿಸ್ತಾನ ಅಂಧರ ಕ್ರಿಕೆಟ್ ತಂಡ ಈ ಕುರಿತು ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದು, ಭಾರತದ ವಿದೇಶಾಂಗ ಸಚಿವಾಲಯದ ಅನುಮತಿ ಸಿಗದ ಹಿನ್ನೆಲೆಯಲ್ಲಿ ಟೂರ್ನಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದಾಗಿ ಹೇಳಿದೆ.

‘ಇದೊಂದು ದುರದೃಷ್ಟಕರ ಘಟನೆಯಾಗಿದ್ದು, ಪಾಕಿಸ್ತಾನ ತಂಡಕ್ಕೆ ಟೂರ್ನಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿರುವುದು ಬೇಸರದ ಸಂಗತಿ,’ ಎಂದು ಹೇಳಿದೆ.

‘ಭಾರತದ ಈ ನೀತಿಯನ್ನು ನಾವು ಖಂಡಿಸುತ್ತೇವೆ. ರಾಜಕೀಯ ಹಾಗೂ ಧರ್ಮವನ್ನು ಮೀರಿದ್ದು ಕ್ರೀಡೆ. ಭಾರತದ ಅಂಧರ ಕ್ರಿಕೆಟ್‌ ಸಂಸ್ಥೆಯು ನಮಗೆ ವೀಸಾ ಒದಗಿಸಲು ಸರಕಾರಕ್ಕೆ ಮನವಿ ಮಾಡಿತ್ತು. ಆದರೆ, ವಿದೇಶಾಂಗ ಸಚಿವಾಲಯ ನಿರಾಕರಿಸಿತು,’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಡಿಸೆಂಬರ್‌ 5ರಂದು ಆರಂಭಗೊಂಡಿರುವ ಟೂರ್ನಿ 17 ರವರೆಗೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!