ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗೆ ಇನ್ನೇನು ಮೂರು ದಿನಗಳಷ್ಟೇ ಬಾಕಿ ಇರುವಾಗ ಬಲೂಚಿಸ್ತಾನದ ಚುನಾವಣಾ ಆಯೋಗದ ಕಚೇರಿಯ ಹೊರಗೆ ಬಾಂಬ್ ಸ್ಫೋಟ ಸಂಭವಿಸಿದೆ.
ನುಷ್ಕಿ ಜಿಲ್ಲೆಯ ಪಾಕಿಸ್ತಾನ ಚುನಾವಣಾ ಆಯೋಗದ ಕಚೇರಿಯ ಹೊರಗೆ ಬಾಂಬ್ ಸ್ಫೋಟ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಸದ್ಯ ಪೊಲೀಸರು ಬಾಂಬ್ ಸ್ಫೋಟಿಸಿದವರು ಯಾರು ಎನ್ನುವ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಕಳೆದ ವಾರವೂ ಕರಾಚಿಯ ಚುನಾವಣಾ ಆಯೋಗದ ಎದುರು ಸ್ಫೋಟ ಸಂಭವಿಸಿತ್ತು.