ಹಗರಣದಲ್ಲಿ ಬಂಧಿತ ಪಾರ್ಥ ಚಟರ್ಜಿಗೆ ಶಾಕ್ : ಸಂಪುಟದಿಂದ ವಜಾಗೊಳಿಸಿದ ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಪಶ್ಚಿಮ ಬಂಗಾಳ ಕೈಗಾರಿಕೆ ಸಚಿವ ಪಾರ್ಥ ಚಟರ್ಜಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಸಂಪುಟದಿಂದ ವಜಾಗೊಳಿಸಿದ್ದಾರೆ.
ಇದಕ್ಕು ಮುನ್ನ ಪಾರ್ಥ ಚಟರ್ಜಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಹಾಗೂ ಇತರ ನಾಯಕರು ಒತ್ತಾಯಿಸಿದ್ದರು.
ಚಟರ್ಜಿ ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿಯವರೊಂದಿಗೆ ನಂಟು ಹೊಂದಿರುವ ಅಪಾರ್ಟ್‌ಮೆಂಟ್‌ಗಳಿಂದ ಸುಮಾರು 50 ಕೋಟಿ ರೂಪಾಯಿ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಆಸ್ತಿ ಮತ್ತು ವಿದೇಶಿ ವಿನಿಮಯದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!