ಹೊಸದಿಗಂತ ಡಿಜಿಟಲ್ ಡೆಸ್ಕ್
ಭಾರತೀಯ ರೈಲ್ವೆ ಪ್ಲಾಟ್ಫಾರ್ಮ್ ಟಿಕೆಟ್ ಗಳ ಬೆಲೆಯನ್ನು ಇಲಾಖೆ ಮೂರು ಪಟ್ಟು ಹೆಚ್ಚಿಸಿದ್ದು, ಈ ಮೂಲಕ ಪ್ರಯಾಣಿಕರಿಗೆ ದೊಡ್ಡ ಹೊಡೆತವನ್ನು ನೀಡಿದೆ.
ಈ ಹಿಂದೆ ಪ್ಲಾಟ್ಫಾರ್ಮ್ ಟಿಕೆಟ್ ಕೇವಲ 10 ರೂ.ಗೆ ಇತ್ತು. ಆದ್ರೆ ಇದೀಗ 30 ರೂ.ಗೆ ಏರಿಕೆ ಮಾಡಲಾಗಿದೆ.
ಮಾಹಿತಿಯ ಪ್ರಕಾರ, ಹಬ್ಬದ ಋತುವಿನಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯ ಜನಸಂದಣಿ ಇರುವ ಕಾರಣ ಪ್ರಯಾಣಿಕರಿಗಿಂತ ಹೆಚ್ಚಾಗಿ, ಅವರನ್ನು ಡ್ರಾಪ್ ಮಾಡಲು ಬರುವ ಸಾಮಾನ್ಯ ಜನರ ಸಂಖ್ಯೆ ಹೆಚ್ಚಾಗಿದ್ದು, ಈ ಜನಸಂದಣಿಯನ್ನು ಕಡಿಮೆ ಮಾಡುವ ಸಲುವಾಗಿ ಮುಂಬರುವ ಛತ್ ಹಬ್ಬದವರೆಗೆ ಪ್ಲಾಟ್ಫಾರ್ಮ್ ಟಿಕೆಟ್ಗಳನ್ನು ಹೆಚ್ಚಳ ಮಾಡಿದೆ ಎನ್ನಲಾಗಿದೆ.
ದೆಹಲಿ, ನಿಜಾಮುದ್ದೀನ್, ಆನಂದ್ ವಿಹಾರ್ ಮತ್ತು ಗಾಜಿಯಾಬಾದ್ ನಿಲ್ದಾಣಗಳಲ್ಲಿ ಪ್ಲಾಟ್ಫಾರ್ಮ್ ಟಿಕೆಟ್ಗಳು ಅಕ್ಟೋಬರ್ 5 ರಿಂದ ಅಕ್ಟೋಬರ್ 31, 2022 ರವರೆಗೆ 30 ರೂ.ಗೆ ಲಭ್ಯವಿರುತ್ತವೆ ಅಂತ ತಿಳಿಸಿದೆ.