ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026 ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ RCB ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಪ್ರಮುಖ ವೇಗಿ ಜೋಶ್ ಹೇಝಲ್‌ವುಡ್ ಆರಂಭಿಕ ಪಂದ್ಯಗಳಿಗೆ ಲಭ್ಯರಾಗುವುದಿಲ್ಲ ಎಂಬ ಮಾಹಿತಿ ಹೊರಬಂದಿದೆ.
ಮಾರ್ಚ್ 28ರಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿರುವ ಆರ್‌ಸಿಬಿ, ತನ್ನ ಪ್ರಮುಖ ಬೌಲರ್ ಸೇವೆ ಕಳೆದುಕೊಳ್ಳಲಿದೆ. ಹೇಝಲ್‌ವುಡ್ ಕಾಲಿನ ಹಿಮ್ಮಡಿ ಗಾಯದಿಂದ ಇನ್ನೂ ಚೇತರಿಸಿಕೊಳ್ಳದಿರುವುದರಿಂದ ಆರಂಭಿಕ ಹಂತದ ಪಂದ್ಯಗಳಿಂದ ದೂರ ಉಳಿಯಲಿದ್ದಾರೆ.
ಇದನ್ನೂ ಓದಿ:
ಈ ಕಾರಣದಿಂದ ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಗಳಲ್ಲಿಯೂ ಅವರು ಆಡಲು ಸಾಧ್ಯವಿಲ್ಲ ಎಂದು ತಿಳಿದುಬಂದಿದೆ. ಏಪ್ರಿಲ್ ಎರಡನೇ ವಾರದೊಳಗೆ ಫಿಟ್‌ನೆಸ್ ಸಾಧಿಸಿದರೆ ಮಾತ್ರ ಅವರ ಮರಳುವಿಕೆ ಸಾಧ್ಯ.
ಹೀಗಾಗಿ, ಟೂರ್ನಿ ಆರಂಭದಲ್ಲೇ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡಬೇಕಾದ ಪರಿಸ್ಥಿತಿ ಆರ್‌ಸಿಬಿಗೆ ಎದುರಾಗಿದೆ.



