Thursday, February 2, 2023

Latest Posts

ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಶಾಕ್: ನಾಯಕ ರಾಹುಲ್​ಗೆ ಗಾಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಶಾಕ್ ಎದುರಾಗಿದ್ದು, ನಾಯಕ ಕೆಎಲ್ ರಾಹುಲ್ ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ .

ಮೀರ್‌ಪುರದಲ್ಲಿ ನೆಟ್ಸ್‌ನಲ್ಲಿ ಅಭ್ಯಾಸ ಮಾಡುವಾಗ ಕೆಎಲ್ ರಾಹುಲ್ ಅವರ ಕೈಗೆ ಗಾಯವಾಗಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಬಿಸಿಸಿಐ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ ರಾಹುಲ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಾರೋ, ಇಲ್ಲವೋ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ರಾಹುಲ್ ಇಂಜುರಿ ಬಗ್ಗೆಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಹೇಳಿಕೆ ನೀಡಿದ್ದು, ಕೆಎಲ್ ರಾಹುಲ್ ಗಾಯ ಗಂಭೀರವಾಗಿಲ್ಲ. ಆದರೆ ಎರಡನೇ ಟೆಸ್ಟ್‌ಗೆ ರಾಹುಲ್ ಫಿಟ್ ಆಗುತ್ತಾರೋ ಇಲ್ಲವೋ ಎಂಬ ಬಗ್ಗೆ ಖಚಿತತೆ ಇಲ್ಲ ಎಂದಿದ್ದಾರೆ. ಒಂದು ವೇಳೆ ರಾಹುಲ್ ಗಾಯದ ಸಮಸ್ಯೆಯಿಂದ ಎರಡನೇ ಟೆಸ್ಟ್‌ನಲ್ಲಿ ಆಡದೇ ಇದ್ದರೆ ಭಾರತ ತಂಡಕ್ಕೆ ನಾಯಕತ್ವ ಮತ್ತು ಓಪನಿಂಗ್ ಎರಡೂ ಕೂಡ ಸಮಸ್ಯೆಯಾಗಲಿದೆ.

ಸದ್ಯಕ್ಕೆ ರಾಹುಲ್​ ಆರೋಗ್ಯವಾಗಿದ್ದಾರೆ. ಎಲ್ಲ ಸರಿಯಾಗಿದೆ ಎಂದು ಭಾವಿಸುವೆ. ಪ್ರಸ್ತುತ, ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಅಲ್ಲದೆ ಎರಡನೇ ಟೆಸ್ಟ್‌ ಆರಂಭಕ್ಕೂ ಮುನ್ನ ಅವರು ಚೇತರಿಸಿಕೊಳ್ಳಲಿ ಎಂದು ಹಾರೈಸುವೆ ಎಂದಿದ್ದಾರೆ.

ಎರಡು ಟೆಸ್ಟ್‌ಗಳ ಸರಣಿಯ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದೆ. ಈ ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ಭಾರತ ತಂಡ ಬಯಸುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!