March 22, 2026
Sunday, March 22, 2026
spot_img

ವಿಶ್ವಕಪ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಶಾಕ್: ಹರ್ಷಿತ್ ರಾಣಾ ಟೂರ್ನಿಯಿಂದ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ಶ್ರೀಲಂಕಾದಲ್ಲಿ ಫೆಬ್ರವರಿ 7ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಮುನ್ನ ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆ ಎದುರಾಗಿದೆ. ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಈ ಪ್ರಮುಖ ಟೂರ್ನಿಯಿಂದ ಹೊರಗುಳಿಯಬೇಕಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಹರ್ಷಿತ್ ಮೊಣಕಾಲಿಗೆ ಗಾಯವಾಗಿತ್ತು. ಪಂದ್ಯದಲ್ಲಿ ಕೇವಲ ಒಂದು ಓವರ್ ಮಾತ್ರ ಎಸೆದ ಅವರು ಬಳಿಕ ಮೈದಾನ ತೊರೆದಿದ್ದರು. ಆರಂಭದಲ್ಲಿ ಸಣ್ಣ ಗಾಯವೆಂದು ಭಾವಿಸಿದ್ದರೂ, ನಂತರದ ಪರೀಕ್ಷೆಯಲ್ಲಿ ಗಾಯ ಗಂಭೀರವಾಗಿರುವುದು ತಿಳಿದುಬಂದಿದೆ. ಇದರಿಂದ ಅವರ ಚೊಚ್ಚಲ ಟಿ20 ವಿಶ್ವಕಪ್ ಕನಸು ಭಂಗವಾಗಿದೆ.

ಇದನ್ನೂ ಓದಿ:

ಕಳೆದ ಕೆಲವು ತಿಂಗಳುಗಳಿಂದ ವೇಗದ ಬೌಲಿಂಗ್ ವಿಭಾಗದಲ್ಲಿ ಭರವಸೆಯ ಆಟಗಾರನಾಗಿ ಕಾಣಿಸಿಕೊಂಡಿದ್ದ ಹರ್ಷಿತ್, ಮುಖ್ಯ ಪಂದ್ಯಗಳಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಸಂಪೂರ್ಣ ಚೇತರಿಸಿಕೊಳ್ಳದ ಕಾರಣ ಟೂರ್ನಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ವರದಿಗಳು ಸೂಚಿಸುತ್ತಿವೆ.

ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್‌ ಇದ್ದರೂ, ಬ್ಯಾಕಪ್ ವೇಗಿಯಾಗಿ ಹರ್ಷಿತ್ ಅಗತ್ಯವಿದ್ದರು. ಈಗ ಬೌಲಿಂಗ್ ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ಮೇಲೆ ತಂಡ ಹೆಚ್ಚು ಭರವಸೆ ಇಡುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !