ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿ ಮುನ್ನ ಟೀಮ್ ಇಂಡಿಯಾಗೆ ಶಾಕ್: ಸ್ಟಾರ್ ಆಟಗಾರ ಔಟ್ !

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾ ಇದೀಗ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಗಾಗಿ ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ಆಘಾತ ಎದುರಾಗಿದೆ.

ಭಾರತ ತಂಡದ ಪ್ರಮುಖ ಆಟಗಾರ ಶ್ರೇಯಸ್ ಅಯ್ಯರ್ ಫೆಬ್ರವರಿ 9 ರಿಂದ ಶುರುವಾಗಲಿರುವ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದ ಅಯ್ಯರ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ.ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಸರಣಿಯ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ಇನ್ನುಬದಲಿ ಆಟಗಾರನನ್ನು ಆಯ್ಕೆ ಮಾಡುವುದು ಅನುಮಾನವಾಗಿದ್ದು, ಏಕೆಂದರೆ ತಂಡದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಸೂರ್ಯಕುಮಾರ್ ಇದ್ದಾರೆ.

ಸದ್ಯ ಬೆಂಗಳೂರಿನ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಯ್ಯರ್ ಫೆಬ್ರವರಿ 17 ರಿಂದ ದೆಹಲಿಯಲ್ಲಿ ಪ್ರಾರಂಭವಾಗುವ ಎರಡನೇ ಟೆಸ್ಟ್‌ ವೇಳೆಗೆ ಭಾರತ ತಂಡವನ್ನು ಸೇರುವ ನಿರೀಕ್ಷೆಯಿದೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ಗೆ ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!