ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶ ವಿಮತ್ತು ಪಾಕಿಸ್ತಾನ ವಿರುದ್ಧ ಗೆದ್ದು ಸೆಮಿಫೈನಲ್ಗೆ ಎಂಟ್ರಿ ನೀಡಿದೆ. ಇಷ್ಟೇ ಅಲ್ಲ ಭಾರತ ತಂಡದೊಂದಿಗೆ ನ್ಯೂಜಿಲೆಂಡ್ ಕೂಡ ಸೆಮೀಸ್ಗೆ ಕ್ವಾಲಿಫೈ ಆಗಿದೆ.
ಇತ್ತ ಸೆಮೀಸ್ಗೆ ಎಂಟ್ರಿ ಆದ್ರೂ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ಮಧ್ಯೆ ಚಾಂಪಿಯನ್ಸ್ ಟ್ರೋಫಿ “ಎ” ಗುಂಪಿನ ಕೊನೆಯ ಪಂದ್ಯ ನಡೆಯಲಿದೆ. ಈ ಮಧ್ಯೆ ಟೀಮ್ ಇಂಡಿಯಾಗೆ ಶಾಕಿಂಗ್ ನ್ಯೂಸ್ ಒಂದಿದೆ.
ನ್ಯೂಜಿಲೆಂಡ್ ವಿರುದ್ಧದ ಮಹತ್ವದ ಪಂದ್ಯದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಔಟ್ ಆಗಿದ್ದಾರೆ. ಇವರಿಗೆ ರೆಸ್ಟ್ ನೀಡುವ ಸಾಧ್ಯತೆ ಇದೆ.
ಕ್ಯಾಪ್ಟನ್ ರೋಹಿತ್ ಶರ್ಮಾ ಪಾಕ್ ವಿರುದ್ಧ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಎರಡು ದಿನಗಳ ರೆಸ್ಟ್ ಬಳಿಕ ಭಾರತ ಅಭ್ಯಾಸ ಆರಂಭಿಸಿದೆ. ಈ ವೇಳೆ ರೋಹಿತ್ ಶರ್ಮಾ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸಿದ್ರು. ಆದ್ರೆ, ಇನ್ನೂ ಫಿಟ್ ಆಗಿಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ.
ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಇತ್ತೀಚೆಗೆ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ.