ಹೊಸ ವರ್ಷದ ಸ್ವಾಗತಕ್ಕೆ ಸಜ್ಜಾಗುತ್ತಿರುವ ಜನರಿಗೆ ಶಾಕ್: ಈ ದಿನ ಬೆಂಗಳೂರಿನಲ್ಲಿ ಓಡಾಡಲ್ಲ ಆಟೋ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಲಿಕಾನ್ ಸಿಟಿ ಜನರು ಹೊಸ ವರ್ಷದ ಸ್ವಾಗತಕ್ಕೆ ಸಜ್ಜಾಗಿದ್ದು, ಇದೀಗ ಸಂಭ್ರಮಕ್ಕೆ ಆಟೋ ಚಾಲಕರು ಶಾಕ್ ನೀಡಲು ಸಿದ್ದರಾಗಿದ್ದಾರೆ.
ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 29 ರಿಂದ ಆಟೋ ಚಾಲಕರು ಸಂಚಾರ ಬಂದ್ ಮಾಡಲು ತೀರ್ಮಾನಿಸಿದ್ದು, ಇದರಿಂದ ಬೆಂಗಳೂರಿನಲ್ಲಿ ಆಟೋ ಓಡಾಟ ಬಹುತೇಕ ಸ್ತಬ್ಧವಾಗುವ ಸಾಧ್ಯತೆ ಇದೆ.

ಸಾರಿಗೆ ಇಲಾಖೆ ರ‍್ಯಾಪಿಡೊ ಬೈಕ್, ಟ್ಯಾಕ್ಸಿ ಬ್ಯಾನ್ ಮಾಡಬೇಕು, ಬೌನ್ಸ್ ಎಲೆಕ್ಟ್ರಿಕ್‌ ಬೈಕ್‌ಗೆ ನೀಡಿರುವ ಅನುಮತಿ ತೆಗೆದುಹಾಕಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಡಿ.29ಕ್ಕೆ ಸಂಪೂರ್ಣ ಆಟೋ ಓಡಾಟ ಸ್ಥಗಿತಗೊಳಿಸಲು ತೀರ್ಮಾನಿಸಿದ್ದು, ಬರೊಬ್ಬರಿ ನಗರದ 2 ಲಕ್ಷ ಆಟೋ ಚಾಲಕರು ಬೆಂಬಲ ಸೂಚಿಸಿದ್ದಾರೆ.

ಇತ್ತೀಚಿಗಷ್ಟೇ ಸಾರಿಗೆ ಇಲಾಖೆ ರಾಜ್ಯದಲ್ಲಿ ಕೆಲ ಖಾಸಗಿ ಕಂಪನಿಗಳ ಎಲೆಕ್ಟ್ರಿಕ್‌ ಬೈಕ್ (Electric Bike), ಟ್ಯಾಕ್ಸಿಗೆ ಅವಕಾಶ ನೀಡಿತ್ತು. ಇದೀಗ ಆ ಅನುಮತಿಗೆ ಆಟೋ ಚಾಲಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಇಲಾಖೆ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿ ಡಿ.29 ರಂದು ಬೆಂಗಳೂರಿನಾದ್ಯಂತ ಆಟೋ ಸಂಚಾರ ಸ್ಥಗಿತಗೊಳಿಸಲು ಆಟೋ ಚಾಲಕರು ಮುಂದಾಗಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ (ಮೆಜೆಸ್ಟಿಕ್) ದಿಂದ ಬೃಹತ್ ಆಟೋ ರ‍್ಯಾಲಿ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಈ ಆಟೋ ಮುಷ್ಕರಕ್ಕೆ ಈಗಾಗಲೇ 21 ಆಟೋ ಸಂಘಟನೆಗಳು ಸಾಥ್ ನೀಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!