Saturday, April 1, 2023

Latest Posts

ಯುಗಾದಿ ಹಬ್ಬಕ್ಕೆ ಊರಿಗೆ ಹೋಗಲು ಪ್ಲಾನ್ ಮಾಡಿದವರಿಗೆ ಶಾಕ್: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆಕೊಟ್ಟ ಸಾರಿಗೆ ನೌಕರರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಂದೆಡೆ ಯುಗಾದಿ ಹಬ್ಬಕ್ಕೆ ಊರಿಗೆ ಹೋಗಲು ಜನರು ಸಜ್ಜಾಗುತ್ತಿದ್ದು, ಇತ್ತ ರಾಜ್ಯ ಸಾರಿಗೆ ನೌಕರರ ಸಂಘ (KSRTC Staff And Workers Union) ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ. ಈ ಮೂಲಕ ಯುಗಾದಿಯ ಮೊದಲ ದಿನ ಊರಿಗೆ ಹೋಗಲು ಸಿದ್ಧತೆ ನಡೆಸಿದವರಿಗೆ ಶಾಕ್ ನೀಡಿದ್ದಂತಾಗಿದೆ.

ಮಾಚ್ 21ರಂದು ಬೆಳಗ್ಗೆ 6 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ ಎಂದು ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ್ ಸುಬ್ಬಾರಾವ್ (Anantha Subbarao) ತಿಳಿಸಿದ್ದಾರೆ.
ಮುಂದಿನ ಮಂಗಳವಾರ ನಮ್ಮ ಮುಷ್ಕರ ನಡೆಯಲಿದೆ. 1 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಸುಮಾರು 23 ಸಾವಿರ ಬಸ್‌ಗಳು ಸ್ಥಗಿತಗೊಳ್ಳಲಿವೆ. ಯಾವುದೇ ಕಾರಣಕ್ಕೂ ಡಿಪೋದಿಂದ ಬಸ್‌ಗಳನ್ನು ತೆಗೆಯಲ್ಲ ಎಂದು ಹೇಳಿದ್ದಾರೆ.

ಸರ್ಕಾರಿ ನೌಕರರ ಪ್ರತಿಭಟನೆ ನಡೆದಾಗ ಶೇ.17 ವೇತನ ಹೆಚ್ಚಳ ಮಾಡಿದ್ರು. ಆದ್ರೆ ನಮಗೆ ಇನ್ನೂ ವೇತನ ಹೆಚ್ಚಳದ ಬಗ್ಗೆ ಮಾಹಿತಿ ಕೊಟ್ಟಿಲ್ಲ. ಸಾರಿಗೆ ಇಲಾಖೆ ಆಡಳಿತ ಮಂಡಳಿ ಬೇಡಿಕೆಗಳನ್ನೆಲ್ಲಾ ಮುಖ್ಯಮಂತ್ರಿಗಳ ಅಂಗಳಕ್ಕೆ ಹಾಕಿಬಿಟ್ಟಿದ್ದಾರೆ. ಈವರೆಗೆ ಪ್ರತಿಕ್ರಿಯಿಸದೇ ಇರುವುದರಿಂದ ಮುಷ್ಕರಕ್ಕೆ ಕರೆ ನೀಡುತ್ತಿದ್ದೇವೆ. ಜನ ನಮ್ಮನ್ನ ಕ್ಷಮಿಸಬೇಕು. ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!