ಹೊಸದಿಗಂತ ಡಿಜಿಟಲ್ ಡೆಸ್ಕ್
ಬ್ಯಾಂಕ್ನಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೊಳಪಡಿಸಿದೆ.
ಜಮ್ಮು-ಕಾಶ್ಮೀರ ಬ್ಯಾಂಕ್‌ನಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ 2021ರಲ್ಲಿ ಬ್ಯಾಂಕ್ನ ಮಾಜಿ ಅಧ್ಯಕ್ಷ ಮುಷ್ತಾಕ್ ಅಹ್ಮದ್ ಶೇಖ್ ಮತ್ತು ಇತರರ ವಿರುದ್ಧ ಸಾಲ ಹಾಗೂ ಹೂಡಿಕೆಗಳ ಮಂಜೂರಾತಿಯಲ್ಲಿ ಅಕ್ರಮಗಳ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿತ್ತು. ಈ ವೇಳೆ ಬ್ಯಾಂಕ್ನಲ್ಲಿ 180 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿತ್ತು.
ಇಂದು ದೆಹಲಿಯಲ್ಲಿ
ಜಾರಿ ನಿರ್ದೇಶನಾಲಯದಿಂದ ಓಮರ್ ಅಬ್ದುಲ್ಲಾ ಅವರನ್ನು ವಿಚಾರಣೆಗೊಳಪಡಿಸುತ್ತಿದ್ದಂತೆ ಜಮ್ಮು-ಕಾಶ್ಮೀರ ನ್ಯಾಷನಲ್ ಕಾನ್ಪರೆನ್ಸ್ ಪಾರ್ಟಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದೆ.