ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಶಾಕ್: ಸಚಿವ ಸ್ಥಾನಕ್ಕೆ ರಿಷಿ ರಾಜೀನಾಮೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಿಟನ್ ಸಚಿವ ಸಂಪುಟದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದ್ದು, ತಮ್ಮ ಹಣಕಾಸು ಸಚಿವ ಸ್ಥಾನಕ್ಕೆ ಇನೋಸಿಸ್ ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಾಕ್ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ರಿಷಿ, ಸರ್ಕಾರ ಸಮರ್ಥವಾಗಿರಬೇಕು ಎಂದು ಜನರು ನಿರೀಕ್ಷಿಸುತ್ತಾರೆ. ಇದು ನನ್ನ ಕೊನೆಯ ಸರ್ಕಾರಿ ಹುದ್ದೆ ಎಂದು ಭಾವಿಸುತ್ತೇನೆ. ನನ್ನ ಹೋರಾಟಕ್ಕೆ ಇದು ಮಾನದಂಡವಾಗಲಿದೆ. ನಾನು ರಾಜೀನಾಮೆ ನೀಡುತ್ತಿದ್ದೇನೆ. ಪ್ರಧಾನಿಗೆ ಬರೆದ ನನ್ನ ಪತ್ರ ಕೆಳಗಿದೆ ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ ಆರೋಗ್ಯ ಕಾರ್ಯದರ್ಶಿ ಸಜ್ಜಿದ್ ಜಾವೇದ್ ಅವರೂ ಕೂಡಾ ತಮ್ಮ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿದ್ದಾರೆ.
ಈ ಬೆಳವಣಿಗೆಗಳು ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು ಸರ್ಕಾರ ಅಪಾಯದ ಅಂಚಿಗೆ ಜಾರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!