ರಾಜ್ಯದ ಪಿಜಿಗಳಿಗೆ ಶಾಕ್‌: ಆಹಾರ ಸುರಕ್ಷತಾ ಇಲಾಖೆಯಿಂದ 127 ಪಿಜಿಗಳಿಗೆ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಿಜಿಗಳಲ್ಲಿ ಆಹಾರ ಸುರಕ್ಷತೆ ಕಾಪಾಡಿಕೊಳ್ಳದ ಹಿನ್ನೆಲೆ ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ನೋಟಿಸ್ ನೀಡಿದೆ.

ರಾಜ್ಯದ 305 ಪಿಜಿಗಳಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 127 ಪಿಜಿಗಳಲ್ಲಿ ಆಹಾರ ಪದಾರ್ಥಗಳನ್ನು ಸಂಗ್ರಹ ಮಾಡಲಾಗಿದೆ.

ಸಂಗ್ರಹಿಸಿದ ಆಹಾರ ಪದಾರ್ಥಗಳನ್ನು ಪರೀಕ್ಷಿಸಿದ ವೇಳೆ ಸುರಕ್ಷತೆ ಕಾಪಾಡದೇ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆ 127 ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ಅದರಲ್ಲಿ ನಾಲ್ಕು ಪಿಜಿಗಳಿಗೆ ಸೇರಿ ಒಟ್ಟು 21,000 ರೂ. ದಂಡ ಹಾಕಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!