ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ಸಿನಿ ಇಂಡಸ್ಟ್ರಿಯಲ್ಲಿ ಹಲವು ದಶಕಗಳಿಂದ ಸಕ್ರಿಯರಾಗಿದ್ದ ಖ್ಯಾತ ನಿರ್ಮಾಪಕ ಕೆ.ರಾಜನ್ ಅವರ ನಿಧನದ ಸುದ್ದಿ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದೆ.
ನಿರ್ಮಾಪಕ, ನಿರ್ದೇಶಕ, ನಟ ಹಾಗೂ ಕಥೆಗಾರನಾಗಿ ಗುರುತಿಸಿಕೊಂಡಿದ್ದ ಅವರು ಭಾನುವಾರ ಚೆನ್ನೈನಲ್ಲಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಸೇತುವೆಯಿಂದ ಹಾರಿ ಆತ್ಮಹತ್ಯೆ
ಆರಂಭಿಕ ಮಾಹಿತಿಯ ಪ್ರಕಾರ, ರಾಜನ್ ಚೆನ್ನೈನ ಅಡಯಾರ್ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕುಟುಂಬದವರು ಹಾಗೂ ಆಪ್ತರು ಈ ಬೆಳವಣಿಗೆಯಿಂದ ಶಾಕ್‌ಗೆ ಒಳಗಾಗಿದ್ದಾರೆ.
ಕೆ.ರಾಜನ್ 1983ರಲ್ಲಿ ‘ಬ್ರಹ್ಮಚಾರಿಗಳು’ ಚಿತ್ರದ ಮೂಲಕ ನಿರ್ಮಾಪಕರಾಗಿ ಸಿನಿ ಪಯಣ ಆರಂಭಿಸಿದ್ದರು. ಬಳಿಕ ‘ಅವಳ್ ಪಾವಂ’, ‘ಡಬಲ್ಸ್’, ‘ನಿನೈಕೋಥ ನಾಲಿಯೈ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿ ಹೆಸರು ಮಾಡಿದ್ದರು. 1991ರಲ್ಲಿ ನಿರ್ದೇಶಕರಾಗಿಯೂ ಪಾದಾರ್ಪಣೆ ಮಾಡಿ ಗಮನ ಸೆಳೆದಿದ್ದರು.
ಇದನ್ನೂ ಓದಿ:
ನಟನಾಗಿಯೂ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ ಅವರು, ಸಿನಿಮಾ ಕ್ಷೇತ್ರದ ವಿಚಾರಗಳಲ್ಲಿ ನೇರ ಮತ್ತು ಸ್ಪಷ್ಟ ಅಭಿಪ್ರಾಯ ಹೇಳುವ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು.
ಅವರ ಪುತ್ರ ಪ್ರಭುಕಾಂತ್ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದು, ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ. ಕೆ.ರಾಜನ್ ನಿಧನಕ್ಕೆ ತಮಿಳು ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.



