ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿತಮ್ಮ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಚಿವೆ ಹೆಬ್ಬಾಳಕರ್ ಅವರು ದೂರು ದಾಖಲಿಸಿದ್ದರು. ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಅನ್ವಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. ಸದ್ಯ ಘಟನೆಗೆ ಕುರಿತತಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.
ಸಿಟಿ ರವಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಹೈಕೋರ್ಟ್ ಸಿಟಿ ರವಿ ಅವರನ್ನೂ ಕೂಡಲೇ ಬಿಡುಗಡೆ ಮಾಡಬೇಕು, ಎಲ್ಲಿದ್ದಾರೋ ಅಲ್ಲಿಂದಲೇ ಅವರನ್ನು ಬಂಧಿಸಿ ಎಂದು ಆದೇಶ ಹೊರಡಿಸಿದೆ. ಇದರ ಜೊತೆಗೆ ಈ ಪ್ರಕರಣವನ್ನೂ ತೀವ್ರ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟಾಗಿದೆ.
ಸಿಟಿ ರವಿ ಅವರನ್ನು ಸುವರ್ಣ ಸೌಧದ ಬಳಿ ನಿನ್ನೆ (ಡಿಸೆಂಬರ್ 19) ಸಂಜೆ 6.30ರ ಸಂದರ್ಭದಲ್ಲಿ ಬಂಧನ ಮಾಡಲಾಗಿತ್ತು. ಇಂದು ಅವರನ್ನು ಬೆಳಗಾವಿಯಿಂದ ಬೆಂಗಳೂರಿಗೆ ಕರೆ ತರುತ್ತಿದ್ದ ಸಂದರ್ಭದಲ್ಲಿ ಕೋರ್ಟ್ ಆದೇಶ ನೀಡಿದೆ.ಆ ಮೂಲಕ ಈ ಪ್ರಕರಣವನ್ನು ತೀವ್ರ ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರು ಉಂಟಾಗಿದೆ.