ಮೆಟ್ರೋ ರೂಲ್ಸ್‌ ಬ್ರೇಕ್‌ ಮಾಡಿದ್ರೆ ಏನೂ ಆಗಲ್ಲ ಅಂದ್ಕೊಂಡವರಿಗೆ ಶಾಕ್‌; 27,000 ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡುವ ಹಾಗೂ ಮೆಟ್ರೋ ನಿಯಮಗಳ ಉಲಂಘನೆ ಮಾಡಿದವರಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ (ಬಿಎಂಆರ್ ಸಿಎಲ್) ಶಾಕ್ ನೀಡಿದ್ದು, 6 ತಿಂಗಳಲ್ಲಿ 27,000 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.

ಸೆಪ್ಟೆಂಬರ್ 2024 ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಮೆಟ್ರೋದ ಭದ್ರತಾ ದಳವು ನಡೆಸಿದ ಭದ್ರತಾ ತಪಾಸಣೆಯ ವೇಳೆ ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡುವ ಹಾಗೂ ಮೆಟ್ರೋ ನಿಯಮಗಳ ಉಲಂಘನೆ ಮಾಡಿದ ಸುಮಾರು 27,000 ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿದೆ.

27.000 ಪ್ರಕರಣಗಳ ಆ ಪೈಕಿ ಮೊಬೈಲ್‌ನಲ್ಲಿ ಜೋರಾಗಿ ಸಂಗೀತ ಹಾಕಿದ್ದಕ್ಕಾಗಿ 11,922 ಪ್ರಕರಣಗಳು, ವಿಶೇಷ ಚೇತನರು, ಗರ್ಭಿಣಿಯರು, ಹಿರಿಯ ನಾಗರಿಕರಿಗೆ ಆಸನ ನೀಡದಿದ್ದಕ್ಕಾಗಿ 14,162 ಪ್ರಕರಣಗಳು, ಮೆಟ್ರೋದಲ್ಲಿ ಆಹಾರ ಸೇವಿಸಿದ್ದಕ್ಕಾಗಿ 554 ಹಾಗೂ ದೊಡ್ಡ ಗಾತ್ರದ ಲಗೇಜ್ ಸಾಗಿಸಿದ್ದಕ್ಕೆ 474 ಪ್ರಕರಣಗಳು ದಾಖಲಾಗಿವೆ.

ಈ ಕ್ರಮಗಳಿಗೆ ಯಾವುದೇ ದಂಡವನ್ನು ವಿಧಿಸಲಾಗಿಲ್ಲವಾದರೂ, ಅಂತಹ ನಡವಳಿಕೆಗಳನ್ನು ನಿರುತ್ಸಾಹಗೊಳಿಸಲು ಮತ್ತು ಸಾಮರಸ್ಯದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಅನುಸರಿಸುವ ಪ್ರಾಮುಖ್ಯತೆಯನ್ನು ಬಲಪಡಿಸುವ ಉದ್ದೇಶದಿಂದ ಭದ್ರತಾ ದಳವು ಕಠಿಣ ಎಚ್ಚರಿಕೆಗಳನ್ನು ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!