ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಡವರ ಪಾಲಿನ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದ ದೊಡ್ಡ ಜಾಲವೊಂದು ಚಿತ್ರದುರ್ಗದಲ್ಲಿ ಬಯಲಾಗಿದೆ. ಜಿಲ್ಲಾಡಳಿತವು ಮಿಂಚಿನ ಕಾರ್ಯಾಚರಣೆ ನಡೆಸಿ, ಸುಮಾರು 30 ಟನ್‌ಗೂ ಅಧಿಕ ಅನ್ನಭಾಗ್ಯ ಅಕ್ಕಿ ತುಂಬಿದ್ದ ಲಾರಿಯನ್ನು ಜಪ್ತಿ ಮಾಡಿದೆ.
ಚಿತ್ರದುರ್ಗ ಜಿಲ್ಲಾ ಉಪವಿಭಾಗಾಧಿಕಾರಿ ಮೆಹೆಬೂಬ್ ಜಿಲಾನಿ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಈ ದಾಳಿ ನಡೆಸಿದೆ. ಲಾರಿಯನ್ನು ತಪಾಸಣೆ ಮಾಡಿದಾಗ, ಅದರಲ್ಲಿ 300ಕ್ಕೂ ಹೆಚ್ಚು ಚೀಲಗಳಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಅಧಿಕಾರಿಗಳು ತಕ್ಷಣವೇ ಅಕ್ಕಿಯ ಚೀಲಗಳು ಮತ್ತು ಕಳ್ಳಸಾಗಣೆಗೆ ಬಳಸಲಾಗಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ವಶಪಡಿಸಿಕೊಂಡಿರುವ ಬೃಹತ್ ಪ್ರಮಾಣದ ಅಕ್ಕಿ ಮತ್ತು ಲಾರಿಯನ್ನು ಹೆಚ್ಚಿನ ತನಿಖೆಗಾಗಿ ಚಿತ್ರದುರ್ಗ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಬಡವರ ಪಡಿತರವನ್ನು ದುರುಪಯೋಗಪಡಿಸಿಕೊಂಡಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಕೂಲಂಕಷ ತನಿಖೆ ಮುಂದುವರಿಸಿದ್ದಾರೆ.

