ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ವಿರುದ್ಧ ಈಗ ಸಿಬಿಐ ಎಫ್ಐಆರ್ ದಾಖಲು ಮಾಡಿದೆ.
ಡಿಆರ್‌ಇ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ದೆಹಲಿ ಸಿಬಿಐ ತಂಡ ಪ್ರಕರಣ ದಾಖಲು ಮಾಡಿಕೊಂಡಿದ್ದು, ಬೆಂಗಳೂರು, ದೆಹಲಿ ಹಾಗೂ ಮುಂಬೈನಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಿದೆ. ರನ್ಯಾ ರಾವ್ ಪ್ರಕರಣ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದ ಗೋಲ್ಡ್ ಸ್ಮಗ್ಲಿಂಗ್ ಸಂಬಂಧ ಕೂಡ ತನಿಖೆ ಆರಂಭವಾಗಿದೆ. ಅಂತಾರಾಷ್ಟ್ರೀಯ ಏರ್ಪೋರ್ಟ್ ಗಳಲ್ಲಿ ಕೂಡ ಸಿಬಿಐ ಮಾಹಿತಿ ಸಂಗ್ರಹಿಸುತ್ತಿದೆ ಎಂದು ತಿಳಿದು ಬಂದಿದೆ.
ರನ್ಯಾ ಅಮೆರಿಕ, ಬ್ರಿಟನ್, ಯುಎಇ ದೇಶಗಳಿಗೆ ಹಲವು ಬಾರಿ ಭೇಟಿ ನೀಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದ್ದು, ಇದರಲ್ಲಿ ದೊಡ್ಡವರ ಕೈವಾಡ ಇರಬಹುದು ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.