ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಸೋಮವಾರದಿಂದ 14 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್ಡೌನ್ ಮಾಡುವುದಾಗಿ ಸರ್ಕಾರ ಘೋಷಿಸಿದ್ದು, ಈ ನಡುವೆ ಕರ್ಫ್ಯೂ ಜಾರಿಯಲ್ಲಿದ್ದು ಅದನ್ನು ಉಲ್ಲಂಘಿಸಿ ರಸ್ತೆಗೆ ಇಳಿಯುವವರಿಗೆ ಪೊಲೀಸರು, ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದಾರೆ.
ಕರ್ಫ್ಯೂ ಸಂದರ್ಭದಲ್ಲಿ ವಾಹನಗಳೊಂದಿಗೆ ರಸ್ತೆಗೆ ಇಳಿದಿರುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ರಾಜಧಾನಿ ಬೆಂಗಳೂರಿನಲ್ಲಿ 20 ಗಂಟೆಗಳ ಅವಧಿಯಲ್ಲಿ 3 ಸಾವಿರ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಮಾತ್ರವಲ್ಲ, ಇನ್ನು ಕರ್ಫ್ಯೂ ವೇಳೆ ವಾಹನವೇರಿ ಸವಾರಿ ಹೊರಡುವವರಿಗೆ ಸದ್ಯಕ್ಕಂತೂ ಅವರ ವಾಹನ ವಾಪಸ್ ಸಿಗುವುದಿಲ್ಲ ಎಂಬ ಎಚ್ಚರಿಕೆಯನ್ನು ಮತ್ತೊಮ್ಮೆ ನೀಡಿದ್ದಾರೆ.
ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 8ರ ವರೆಗೆ ಕಾರ್ಯಾಚರಣೆ ನಡೆಸಿ 3000 ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಆ ಪೈಕಿ ದ್ವಿಚಕ್ರ ವಾಹನ 2723, ತ್ರಿಚಕ್ರವಾಹನ 171 ಹಾಗೂ ನಾಲ್ಕು ಚಕ್ರದ ವಾಹನಗಳು 106 ಇವೆ.