March 3, 2026
Tuesday, March 3, 2026
spot_img

SHOCKING | ಚಿಕ್ಕಮಗಳೂರಿನಲ್ಲಿ ಹೊತ್ತಿ ಉರಿದ ಬಸ್: 32 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರಿನಲ್ಲಿ ಕೆ ಎಸ್ ಆರ್ ಟಿಸಿ ಬಸ್ ಬೆಂಕಿಗಾಹುತಿಯಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 32 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಜೂನಿಯರ್ ಕಾಲೇಜ್ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ಹಾಸನಕ್ಕೆ ಹೊರಟಿದ್ದ ಸರ್ಕಾರಿ ಬಸ್ಸಿನಲ್ಲಿ ತಾಂತ್ರಿಕ ದೋಷದಿಂದಾಗಿ ಡೀಸೆಲ್ ಸೋರಿಕೆಯಾಗಿತ್ತು.ಇದರ ಪರಿಣಾಮವಾಗಿ ಇಂಜಿನ್ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಬಸ್ಸಿನ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಚಾಲಕ ತಕ್ಷಣವೇ ಬಸ್ಸನ್ನು ನಿಲ್ಲಿಸಿ ಪ್ರಯಾಣಿಕರಿಗೆ ಇಳಿಯುವಂತೆ ಸೂಚಿಸಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ 32 ಪ್ರಯಾಣಿಕರು ಕೂಡಲೇ ಕೆಳಗಿಳಿದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !