Saturday, October 1, 2022

Latest Posts

SHOCKING | ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತೆರಳುತ್ತಿದ್ದ ಕಾರು ಹಾರೂಗೇರಿ ಬಳಿ ಪಲ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ನಡೆದ ಅಪಘಾತದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬುಧವಾರ ಈ ಘಟನೆ ನಡೆದಿದ್ದು, ಸವದಿ ಅವರ ಕಾರು ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಬುಧವಾರ ಅಪಘಾತಕ್ಕೀಡಾಗಿದೆ. ಸವದಿ ಅವರು ಅಥಣಿಯಿಂದ ಬೆಳಗಾವಿಗೆ ಕಾರಿನಲ್ಲಿ ಸಂಚರಿಸುತ್ತಿದ್ದರು. ಈ ವೇಲೆ ಹಾರೂಗೇರಿ ಬಳಿ ಬೈಕೊಂದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ನಾಲ್ವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!