Monday, December 29, 2025

SHOCKING | ಮನೆಯ ಮಹಡಿ ಮೇಲೆ ಡ್ರಮ್‌ನಲ್ಲಿ ವ್ಯಕ್ತಿಯ ಶವ ಪತ್ತೆ: ಹೆಂಡತಿ, ಮೂವರು ಮಕ್ಕಳು ಗಾಯಬ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಮನೆಯ ಛಾವಣಿ ಮೇಲೆ ಡ್ರಮ್‌ನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.

ಅವರ ಪತ್ನಿ, ಮೂವರು ಮಕ್ಕಳು ಮತ್ತು ಮನೆ ಮಾಲೀಕರ ಮಗ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಮೂಲದ ಹಂಸ್ರಾಮ್ ಅಲಿಯಾಸ್ ಸೂರಜ್ ಎಂದು ಗುರುತಿಸಲಾಗಿದ್ದು, ಅವರು ತಮ್ಮ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ಕಿಶನ್‌ಗಢಬಾಸ್‌ನ ಆದರ್ಶ ಕಾಲೋನಿಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಕೆಟ್ಟ ವಾಸನೆ ಬರುತ್ತಿರುವ ಕುರಿತು ಅಕ್ಕಪಕ್ಕದ ಮನೆಯವರು ದೂರು ನೀಡಿದ ನಂತರ, ಶವ ಪತ್ತೆಯಾಗಿದ್ದು, ಗಂಟಲಿನ ಭಾಗದಲ್ಲಿ ಹರಿತವಾದ ಆಯುಧದಿಂದ ಹೊಡೆದಿರುವ ಗಾಯ ಕಂಡುಬಂದಿದೆ. ದೇಹದ ಕೊಳೆಯುವಿಕೆಯನ್ನು ವೇಗಗೊಳಿಸಲು ಅದರ ಮೇಲೆ ಉಪ್ಪು ಹಾಕಲಾಗಿತ್ತು ಎನ್ನಲಾಗಿದೆ.

ಹಂಸ್ರಾಮ್ ಕಳೆದ ಒಂದೂವರೆ ತಿಂಗಳಿನಿಂದ ಟೆರೇಸ್ ಮೇಲಿನ ಕೊಠಡಿಯೊಂದರಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು ಮತ್ತು ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಸುನೀತಾ, ಮೂವರು ಮಕ್ಕಳು ಮತ್ತು ಮನೆ ಮಾಲೀಕರ ಮಗ ಜಿತೇಂದ್ರ ಶನಿವಾರದಿಂದ ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!