ಹೊಸದಿಗಂತ ಡಿಜಿಟಲ್ ಡೆಸ್ಕ್:
ವಸತಿ ಶಾಲೆಯ ಕೋಣೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿನಿ ರೇಖಾ ಗೌಡ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಹಾವೇರಿಯ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.
ರೇಖಾ ಗೌಡರ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಎಂದಿನಂತೆ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದ ರೇಖಾ, ವಾಪಸ್ ಬಂದು ತನ್ನ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.
ಘಟನೆ ಬಗ್ಗೆ ಮಾಹಿತಿ ಪಡೆದ ಬ್ಯಾಡಗಿ ಠಾಣೆ ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ಕಾರಣವೇನು ಎಂಬುದು ಸದ್ಯದ ಮಟ್ಟಿಗೆ ತಿಳಿದುಬಂದಿಲ್ಲ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಗೆ ಮುಂದಾಗಿದ್ದಾರೆ. ತಮ್ಮ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.