ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದವರು ಸೇರಿದಂತೆ ಒಟ್ಟು 20 ಸಕ್ರಿಯ ಪ್ರಕರಣಗಳು ದಾಖಲಾಗಿವೆ.
ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನವನ್ನು ನ.3 ರಿಂದ 11ವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದ್ದಾರೆ.

